Wednesday, June 23, 2010

In love...

ನೀನು ನಮ್ಮ ಮನೆಗೆ ಬರೋದಕ್ಕೆ ಮುಹೂರ್ತ ನಿಗದಿಯಾದಾಗ ನನಗೇನೋ ಒಂಥರಾ ಕಾತರ. ನಾನು ತುಂಬಾ ದಿನದಿಂದ ಕಾಣ್ತಾ ಇದ್ದ ಕನಸು ನನಸಾಗೋ ಸಮಯ ಬಂತು ಅಂತ ಒಳಗೊಳಗೇ ಖುಷಿ. ಹೇಗಿರ್ತೀಯೋ ಏನೋ ಅನ್ನೋ ಅನುಮಾನ ಇದ್ರೂ ನನ್ ಸೆಲೆಕ್ಷನ್ ಅಲ್ವಾ ಚೆನ್ನಾಗೇ ಇರ್ತೀಯ ಅನ್ನೋ ವಿಶ್ವಾಸ. ಅಂತೂ ಇಂತೂ ಭಾನುವಾರ ಸಂಜೆ ನಮ್ಮನೆಗೆ ನೀನು ಬಂದಿದ್ದು ಯಾರಿಗೆ ಇಷ್ಟ ಆಯ್ತೋ ಇಲ್ವೋ ನನಗಂತೂ ತುಂಬಾ ಸಂತೋಷ ಆಯ್ತು.ನನ್ನ ತಮ್ಮಂಗೆ ಕೂಡ ನಿನ್ನ ಬಗ್ಗೆ ಕುತೂಹಲ ಇದ್ದಿದ್ದು ಗೊತ್ತಾಯ್ತು. ಪರವಾಗಿಲ್ಲ ನನ್ನ ಸೆಲೆಕ್ಷನ್ ಅಪ್ರೂವ್ ಮಾಡೋಕೆ ಇನ್ನೊಬ್ರು ಜೊತೆಗೆ ಸಿಕ್ಕಿದ್ರು ಅಂತನ್ನಿಸ್ತು.
ನೀನು ಮನೆಗೆ ಬಂದಾಗಿನಿಂದ ನಿನ್ನ ಬಗ್ಗೆ ತಿಳಿದುಕೊಳ್ಳೋಕೆ ತುಂಬಾ ಪ್ರಯತ್ನ ಪಡ್ತಾ ಇದ್ದೀನಿ. ನಿನ್ನ ಬಗ್ಗೆ ಸ್ವಲ್ಪ ಸ್ವಲ್ಪ ತಿಳಿದಾಗಲೂ ನಿನ್ನ ಬಗ್ಗೆ ಅಭಿಮಾನ ಜಾಸ್ತಿಯಾಗ್ತಾ ಇದೆ. ಹಾಗೆ ನನ್ನ ಆಯ್ಕೆ ಬಗ್ಗೆ ಹೆಮ್ಮೆ ಆಗ್ತಾ ಇದೆ. ನಾನು ನಿನ್ನನ್ನು ಇಷ್ಟೊಂದು ಹಚ್ಚಿಕೊಳ್ತೀನಿ. ಇಷ್ಟೊಂದು ಇಷ್ಟ ಪಡೋಕೆ ಶುರು ಮಾಡ್ತೀನಿ ಅಂತ ನಿಜವಾಗಲೂ ಅಂದುಕೊಂಡಿರಲಿಲ್ಲ. ಅಂತೂ ನನ್ನ ಜೀವನದಲ್ಲಿ ಪ್ರೀತಿ ಚಿಗುರೊಡೆದಿದೆ.
Yes I am in love... in love with my new cam...

ನಾನು ಮೊದಲನೇ ವರ್ಷದ ಪದವಿಪೂರ್ವ ತರಗತಿಯಲ್ಲಿದ್ದಾಗ ಅಪ್ಪನ camera ತಗೊಂಡು ಹೋಗಿ ಕಳೆದುಕೊಂಡಾಗಿನಿಂದ ನಾನು ಒಂದು camera ತಗೊಳ್ಳಬೇಕು ಅಂತ ತುಂಬಾ ಇಷ್ಟ ಇತ್ತು. ಆದ್ರೆ ಅಪ್ಪಂಗೆ ನೀವು ನನಗೊಂದು camera ಕೊಡಿಸಿ ಅಂತ ಕೇಳೋ ಧೈರ್ಯ ಇರ್ಲಿಲ್ಲ.ಪ್ರತಿ ಬಾರಿ ಅದರ ಬಗ್ಗೆ ಮಾತಾಡುವಾಗ ಮನೇಲಿದ್ದ camera ಕಳೆದು ಹಾಕಿದ್ದೀನಿ ಅನ್ನೋ ಪಾಪ ಪ್ರಜ್ಞೆ ನಾನು ಆ ಅರ್ಹತೆ ಕಳೆದುಕೊಂಡಿದ್ದೀನಿ ಅಂತ ನನ್ನನ್ನ ಎಚ್ಚರಿಸುತ್ತಿತ್ತು. ಆದ್ರೆ ನನಗೆ ನಮ್ಮ ಕಾಲೇಜಿನ ವತಿಯಿಂದ Prof.MRD Merit Scholarship ಅಂತ ರೂ.೫೦೦೦ ಕೈಗೆ ಬಂದಾಗ ಇದರಿಂದ ನಾನು camera ತಗೊಳ್ಳಬೇಕು ಅಂತ ಅನ್ನಿಸಿದ್ರೂ ಈ ದುಡ್ಡಿಗೆ ನಾನು ಬಯಸುವಂಥಾ camera ಸಿಗೋದಿಲ್ಲ ಅಂತ ಗೊತ್ತಿತ್ತು. ಆದ್ರೂ ಅಪ್ಪ "ಈ ದುಡ್ಡಲ್ಲಿ ಏನ್ಮಾಡ್ತೀಯಮ್ಮಾ? " ಅಂತ ಕೇಳಿದಾಗ," ಅಪ್ಪ ನಾನು camera ತಗೊಳ್ತೀನಿ" ಅಂತ ಹೇಳ್ದೆ. ಅಪ್ಪ "ತಗೊಳ್ಳೋದು ತಗೊಳ್ತೀಯ ಚೆನ್ನಾಗಿರೋದೇ ತಗೋ. ಉಳಿದ ದುಡ್ಡು  ನಾನು ಕೊಡ್ತೀನಿ" ಅಂತ ಹೇಳಿದಾಗ ಖುಷಿಯಿಂದ ಕುಣಿದಾಡಿದ್ದೆ. ಇದಾಗಿ ೬-೭ ತಿಂಗಳಾದರೂ camera ತೆಗೆದುಕೊಳ್ಳುವ  ಯೋಜನೆ ಮುಂದೂಡುತ್ತಲೇ ಹೋಯ್ತು.

ಹೋದ ವಾರ ಅಪ್ಪನ ಜೊತೆ bank ಗೆ ಹೋದಾಗ "ಅಪ್ಪ, camera ತಗೊಳ್ತೀನಿ. ನನ್ನ ಅಕೌಂಟಲ್ಲಿರೋ ದುಡ್ಡು ಡ್ರಾ ಮಾಡ್ತೀನಿ" ಅಂತ ಹೇಳಿ ದುಡ್ಡು ಡ್ರಾ ಮಾಡಿ ಮನೆಗೆ ತಂದಿಟ್ಟೆ. ಆಮೇಲೆ BSNL Training ಗೆ ನೋಂದಣಿ ,GRS trip ಅಂತ ಸಮಯ ಹೊರಟೇ ಹೋಯ್ತು. ಭಾನುವಾರ ಬೆಳಿಗ್ಗೆ ಎಲ್ರೂ ತಿಂಡಿ ತಿಂದು ಮಾತಾಡ್ತಾ ಕೂತಿದ್ದಾಗ "ಅಪ್ಪ ಇವತ್ತು ಏನಾದ್ರೂ ಕೆಲ್ಸ ಇದ್ಯಾ?" ಅಂದೆ. ಅಪ್ಪ "ಯಾಕೆ camera ತಗೊಳ್ಳೋಕಾ?" ಅಂದ್ರು. ಹೂಂ ಅಂದೆ. "ಸರಿ. ಸಂಜೆ ಹೋಗೋಣ" ಅಂದ್ರು. ಸಂಜೆ ರಾಜಾಜಿನಗರದಲ್ಲಿರೋ ezone ಕಡೆ ಹೊರಟಿತು ನಮ್ಮ ಸವಾರಿ. ಅಲ್ಲಿ ನಾನು ತಗೊಂಡಿದ್ದು ನಮ್ಮ budget ಗೆ ಒಪ್ಪುವಂಥ Sony Cybershot W320.

ಅದರ features ಬಗ್ಗೆ handbook ಅಲ್ಲಿ ಓದಿ ಒಂದೊಂದನ್ನೇ ಪ್ರಯೋಗ ಮಾಡುತ್ತಾ, Image editing tool PMB ಅಲ್ಲಿ ನಾನು Image Processing ಅಲ್ಲಿ ಕಲಿತದ್ದನ್ನು ಉಪಯೋಗಿಸಿ ಚಿತ್ರಗಳನ್ನು edit ಮಾಡ್ತಾ ಈ ರಜೆ ಕಳೀತಾ ಇದ್ದೀನಿ.ದಿನೇ ದಿನೇ ನನ್ನ camera ಬಗ್ಗೆ ಒಲವು ಜಾಸ್ತಿಯಾಗ್ತಾ ಇದೆ. ಒಲವು ಜಾಸ್ತಿಯಾಗುತ್ತೋ ಅಥವಾ ಹೋಗ್ತಾ ಹೋಗ್ತಾ ಕಮ್ಮಿಯಾಗುತ್ತೋ ಗೊತ್ತಿಲ್ಲ. ಆದ್ರೆ ಒಂದಂತೂ ನಿಜ "Photography is not my passion. Its just that I am interested in it" . ಈ ವಾರ ನಾ ತೆಗೆದ ಚಿತ್ರಗಳಲ್ಲಿ ನನಗೆ ಇಷ್ಟ ಆದ ಚಿತ್ರಗಳು ಇವು.... :)11 comments:

 1. ಇಂದುಶ್ರೀ;ಕ್ಯಾಮರಾ ಕತೆ ಮತ್ತು ಅದರ ಚಿತ್ರಗಳು ಎರಡೂ ಚೆನ್ನಾಗಿವೆ.

  ReplyDelete
 2. photo chennaagide...... swalpa natural beLaku iddaara nodi, photo tegeyiri........

  ReplyDelete
 3. Good pics...and nice camera also....looks like photos taken with DSLR. keep posting ur photos

  ReplyDelete
 4. ಚಿತ್ರಗಳು ಚೆನ್ನಾಗಿವೆ.....
  ಕ್ಯಾಮರಾ ಕೊಂಡ ಕತೆಯೂ ಕೂಡಾ..........

  ReplyDelete
 5. ಚಿತ್ರ ಹಾಗೂ ಬರಹವನ್ನು ಮೆಚ್ಚಿದ ಡಾ ಗುರುಮೂರ್ತಿ, ಡಾ D.T.K. Murthy,
  ಪ್ರಕಾಶಣ್ಣಾ, ದಿನಕರ , ಸುನಿಲ್ , ಪ್ರವೀಣ್ ಹಾಗೂ ಗುರು ಅವರಿಗೆ ಧನ್ಯವಾದಗಳು... :)

  ReplyDelete
 6. ಹೊಸ ಕ್ಯಾಮರಕ್ಕೆ ಕಂಗ್ರಾಟ್ಸ್ .. ಇನ್ನು ಹೊಸ ಹೊಸ ಏಕ್ಸ್ಪೆರಿಮೆಂಟುಗಳು ಬರಬಹುದೇನೋ ನಿಮ್ಮ ಬ್ಲಾಗ್ ನಲ್ಲಿ.. ಚಿತ್ರ ಕವನ ಇತ್ಯಾದಿ.. :-)

  ReplyDelete
 7. ಬರಹ ಸಕ್ಕತ್ತಾಗಿದೆ. ಚಿತ್ರದಂತೆ!

  ReplyDelete