Thursday, July 1, 2010
Saturday, June 26, 2010
Wednesday, June 23, 2010
In love...
ನೀನು ನಮ್ಮ ಮನೆಗೆ ಬರೋದಕ್ಕೆ ಮುಹೂರ್ತ ನಿಗದಿಯಾದಾಗ ನನಗೇನೋ ಒಂಥರಾ ಕಾತರ. ನಾನು ತುಂಬಾ ದಿನದಿಂದ ಕಾಣ್ತಾ ಇದ್ದ ಕನಸು ನನಸಾಗೋ ಸಮಯ ಬಂತು ಅಂತ ಒಳಗೊಳಗೇ ಖುಷಿ. ಹೇಗಿರ್ತೀಯೋ ಏನೋ ಅನ್ನೋ ಅನುಮಾನ ಇದ್ರೂ ನನ್ ಸೆಲೆಕ್ಷನ್ ಅಲ್ವಾ ಚೆನ್ನಾಗೇ ಇರ್ತೀಯ ಅನ್ನೋ ವಿಶ್ವಾಸ. ಅಂತೂ ಇಂತೂ ಭಾನುವಾರ ಸಂಜೆ ನಮ್ಮನೆಗೆ ನೀನು ಬಂದಿದ್ದು ಯಾರಿಗೆ ಇಷ್ಟ ಆಯ್ತೋ ಇಲ್ವೋ ನನಗಂತೂ ತುಂಬಾ ಸಂತೋಷ ಆಯ್ತು.ನನ್ನ ತಮ್ಮಂಗೆ ಕೂಡ ನಿನ್ನ ಬಗ್ಗೆ ಕುತೂಹಲ ಇದ್ದಿದ್ದು ಗೊತ್ತಾಯ್ತು. ಪರವಾಗಿಲ್ಲ ನನ್ನ ಸೆಲೆಕ್ಷನ್ ಅಪ್ರೂವ್ ಮಾಡೋಕೆ ಇನ್ನೊಬ್ರು ಜೊತೆಗೆ ಸಿಕ್ಕಿದ್ರು ಅಂತನ್ನಿಸ್ತು.
ನೀನು ಮನೆಗೆ ಬಂದಾಗಿನಿಂದ ನಿನ್ನ ಬಗ್ಗೆ ತಿಳಿದುಕೊಳ್ಳೋಕೆ ತುಂಬಾ ಪ್ರಯತ್ನ ಪಡ್ತಾ ಇದ್ದೀನಿ. ನಿನ್ನ ಬಗ್ಗೆ ಸ್ವಲ್ಪ ಸ್ವಲ್ಪ ತಿಳಿದಾಗಲೂ ನಿನ್ನ ಬಗ್ಗೆ ಅಭಿಮಾನ ಜಾಸ್ತಿಯಾಗ್ತಾ ಇದೆ. ಹಾಗೆ ನನ್ನ ಆಯ್ಕೆ ಬಗ್ಗೆ ಹೆಮ್ಮೆ ಆಗ್ತಾ ಇದೆ. ನಾನು ನಿನ್ನನ್ನು ಇಷ್ಟೊಂದು ಹಚ್ಚಿಕೊಳ್ತೀನಿ. ಇಷ್ಟೊಂದು ಇಷ್ಟ ಪಡೋಕೆ ಶುರು ಮಾಡ್ತೀನಿ ಅಂತ ನಿಜವಾಗಲೂ ಅಂದುಕೊಂಡಿರಲಿಲ್ಲ. ಅಂತೂ ನನ್ನ ಜೀವನದಲ್ಲಿ ಪ್ರೀತಿ ಚಿಗುರೊಡೆದಿದೆ.
Yes I am in love... in love with my new cam...
ನಾನು ಮೊದಲನೇ ವರ್ಷದ ಪದವಿಪೂರ್ವ ತರಗತಿಯಲ್ಲಿದ್ದಾಗ ಅಪ್ಪನ camera ತಗೊಂಡು ಹೋಗಿ ಕಳೆದುಕೊಂಡಾಗಿನಿಂದ ನಾನು ಒಂದು camera ತಗೊಳ್ಳಬೇಕು ಅಂತ ತುಂಬಾ ಇಷ್ಟ ಇತ್ತು. ಆದ್ರೆ ಅಪ್ಪಂಗೆ ನೀವು ನನಗೊಂದು camera ಕೊಡಿಸಿ ಅಂತ ಕೇಳೋ ಧೈರ್ಯ ಇರ್ಲಿಲ್ಲ.ಪ್ರತಿ ಬಾರಿ ಅದರ ಬಗ್ಗೆ ಮಾತಾಡುವಾಗ ಮನೇಲಿದ್ದ camera ಕಳೆದು ಹಾಕಿದ್ದೀನಿ ಅನ್ನೋ ಪಾಪ ಪ್ರಜ್ಞೆ ನಾನು ಆ ಅರ್ಹತೆ ಕಳೆದುಕೊಂಡಿದ್ದೀನಿ ಅಂತ ನನ್ನನ್ನ ಎಚ್ಚರಿಸುತ್ತಿತ್ತು. ಆದ್ರೆ ನನಗೆ ನಮ್ಮ ಕಾಲೇಜಿನ ವತಿಯಿಂದ Prof.MRD Merit Scholarship ಅಂತ ರೂ.೫೦೦೦ ಕೈಗೆ ಬಂದಾಗ ಇದರಿಂದ ನಾನು camera ತಗೊಳ್ಳಬೇಕು ಅಂತ ಅನ್ನಿಸಿದ್ರೂ ಈ ದುಡ್ಡಿಗೆ ನಾನು ಬಯಸುವಂಥಾ camera ಸಿಗೋದಿಲ್ಲ ಅಂತ ಗೊತ್ತಿತ್ತು. ಆದ್ರೂ ಅಪ್ಪ "ಈ ದುಡ್ಡಲ್ಲಿ ಏನ್ಮಾಡ್ತೀಯಮ್ಮಾ? " ಅಂತ ಕೇಳಿದಾಗ," ಅಪ್ಪ ನಾನು camera ತಗೊಳ್ತೀನಿ" ಅಂತ ಹೇಳ್ದೆ. ಅಪ್ಪ "ತಗೊಳ್ಳೋದು ತಗೊಳ್ತೀಯ ಚೆನ್ನಾಗಿರೋದೇ ತಗೋ. ಉಳಿದ ದುಡ್ಡು ನಾನು ಕೊಡ್ತೀನಿ" ಅಂತ ಹೇಳಿದಾಗ ಖುಷಿಯಿಂದ ಕುಣಿದಾಡಿದ್ದೆ. ಇದಾಗಿ ೬-೭ ತಿಂಗಳಾದರೂ camera ತೆಗೆದುಕೊಳ್ಳುವ ಯೋಜನೆ ಮುಂದೂಡುತ್ತಲೇ ಹೋಯ್ತು.
ಹೋದ ವಾರ ಅಪ್ಪನ ಜೊತೆ bank ಗೆ ಹೋದಾಗ "ಅಪ್ಪ, camera ತಗೊಳ್ತೀನಿ. ನನ್ನ ಅಕೌಂಟಲ್ಲಿರೋ ದುಡ್ಡು ಡ್ರಾ ಮಾಡ್ತೀನಿ" ಅಂತ ಹೇಳಿ ದುಡ್ಡು ಡ್ರಾ ಮಾಡಿ ಮನೆಗೆ ತಂದಿಟ್ಟೆ. ಆಮೇಲೆ BSNL Training ಗೆ ನೋಂದಣಿ ,GRS trip ಅಂತ ಸಮಯ ಹೊರಟೇ ಹೋಯ್ತು. ಭಾನುವಾರ ಬೆಳಿಗ್ಗೆ ಎಲ್ರೂ ತಿಂಡಿ ತಿಂದು ಮಾತಾಡ್ತಾ ಕೂತಿದ್ದಾಗ "ಅಪ್ಪ ಇವತ್ತು ಏನಾದ್ರೂ ಕೆಲ್ಸ ಇದ್ಯಾ?" ಅಂದೆ. ಅಪ್ಪ "ಯಾಕೆ camera ತಗೊಳ್ಳೋಕಾ?" ಅಂದ್ರು. ಹೂಂ ಅಂದೆ. "ಸರಿ. ಸಂಜೆ ಹೋಗೋಣ" ಅಂದ್ರು. ಸಂಜೆ ರಾಜಾಜಿನಗರದಲ್ಲಿರೋ ezone ಕಡೆ ಹೊರಟಿತು ನಮ್ಮ ಸವಾರಿ. ಅಲ್ಲಿ ನಾನು ತಗೊಂಡಿದ್ದು ನಮ್ಮ budget ಗೆ ಒಪ್ಪುವಂಥ Sony Cybershot W320.
ಅದರ features ಬಗ್ಗೆ handbook ಅಲ್ಲಿ ಓದಿ ಒಂದೊಂದನ್ನೇ ಪ್ರಯೋಗ ಮಾಡುತ್ತಾ, Image editing tool PMB ಅಲ್ಲಿ ನಾನು Image Processing ಅಲ್ಲಿ ಕಲಿತದ್ದನ್ನು ಉಪಯೋಗಿಸಿ ಚಿತ್ರಗಳನ್ನು edit ಮಾಡ್ತಾ ಈ ರಜೆ ಕಳೀತಾ ಇದ್ದೀನಿ.ದಿನೇ ದಿನೇ ನನ್ನ camera ಬಗ್ಗೆ ಒಲವು ಜಾಸ್ತಿಯಾಗ್ತಾ ಇದೆ. ಒಲವು ಜಾಸ್ತಿಯಾಗುತ್ತೋ ಅಥವಾ ಹೋಗ್ತಾ ಹೋಗ್ತಾ ಕಮ್ಮಿಯಾಗುತ್ತೋ ಗೊತ್ತಿಲ್ಲ. ಆದ್ರೆ ಒಂದಂತೂ ನಿಜ "Photography is not my passion. Its just that I am interested in it" . ಈ ವಾರ ನಾ ತೆಗೆದ ಚಿತ್ರಗಳಲ್ಲಿ ನನಗೆ ಇಷ್ಟ ಆದ ಚಿತ್ರಗಳು ಇವು.... :)

Friday, June 4, 2010
ನೀನ್ಯಾರೋ???
ಪರಿಚಯಕ್ಕೂ ಮೊದಲೇ ನನ್ನ
ಸೆಳೆದುಕೊಂಡು ನಿನ್ನ ಕಡೆಗೆ
ನನ್ನ ಗೆದ್ದ ಜಾದುಗಾರ ನೀನ್ಯಾರೋ?
ನನ್ನ ಮನದಂಗಳಕ್ಕೆ ಇಣುಕಿ
ಮಧುರ ತರಂಗಗಳನೆಬ್ಬಿಸಿ
ಮನವ ಕದಡಿದ ಪೋರ ನೀನ್ಯಾರೋ?
ಕಣ್ಣ ರೆಪ್ಪೆಯನ್ನು ಮುಚ್ಚಿದ್ದರೂ
ನೆನಪಾಗಿ ನನ್ನ ಬಿಡದೆ ಕಾಡಿ
ನಿದ್ರೆ ದೂರ ಮಾಡಿದ ತುಂಟ ನೀನ್ಯಾರೋ?
ಬೇಕು ಎಂದು ನನ್ನ ಕೂಡದೆ
ಬೇಡವೆಂದು ದೂರ ದೂಡದೆ
ಹತ್ತಿರವಿದ್ದೂ ದೂರ ನಿಲ್ಲೋ ಗೆಳೆಯ ನೀನ್ಯಾರೋ?
ಕಷ್ಟ ಸುಖದಿ ಜೊತೆಗೆ ನಿಂತು
ನನ್ನ ತುಂಬಾ ನೀನೇ ತುಂಬಿ
ಹೆಸರ ತಿಳಿಸದ ಚೋರ ನೀನ್ಯಾರೋ?
ಸೆಳೆದುಕೊಂಡು ನಿನ್ನ ಕಡೆಗೆ
ನನ್ನ ಗೆದ್ದ ಜಾದುಗಾರ ನೀನ್ಯಾರೋ?
ನನ್ನ ಮನದಂಗಳಕ್ಕೆ ಇಣುಕಿ
ಮಧುರ ತರಂಗಗಳನೆಬ್ಬಿಸಿ
ಮನವ ಕದಡಿದ ಪೋರ ನೀನ್ಯಾರೋ?
ಕಣ್ಣ ರೆಪ್ಪೆಯನ್ನು ಮುಚ್ಚಿದ್ದರೂ
ನೆನಪಾಗಿ ನನ್ನ ಬಿಡದೆ ಕಾಡಿ
ನಿದ್ರೆ ದೂರ ಮಾಡಿದ ತುಂಟ ನೀನ್ಯಾರೋ?
ಬೇಕು ಎಂದು ನನ್ನ ಕೂಡದೆ
ಬೇಡವೆಂದು ದೂರ ದೂಡದೆ
ಹತ್ತಿರವಿದ್ದೂ ದೂರ ನಿಲ್ಲೋ ಗೆಳೆಯ ನೀನ್ಯಾರೋ?
ಕಷ್ಟ ಸುಖದಿ ಜೊತೆಗೆ ನಿಂತು
ನನ್ನ ತುಂಬಾ ನೀನೇ ತುಂಬಿ
ಹೆಸರ ತಿಳಿಸದ ಚೋರ ನೀನ್ಯಾರೋ?
Wednesday, June 2, 2010
ದಾರಿ ಹುಡುಕಬೇಕಿದೆ...
ಮನಸಿನ ಎಲ್ಲಾ ಮಾತುಗಳು
ಮೌನದ ಮುಸುಕಿನಲ್ಲೇ ಜೀವಿಸುತ್ತಿದ್ದಾಗ
ಅವುಗಳಿಗೆ ಅಕ್ಷರ ರೂಪ ಕೊಡಬಲ್ಲೆನೆಂಬ
ಆಶಾಭಾವನೆಯಿಂದ ಬರೆಯಲಾರಂಭಿಸಿದೆ.
ಆದರೆ ನನಗೀಗ ಅನಿಸುತಿದೆ
ತೋಚಿದ್ದನ್ನೆಲ್ಲಾ ನಾ ಬರೆಯಲಾರೆನೆಂದು
ಕೆಲವು ತುಸು ಗಂಭೀರ..ಹಲವು ತೀರಾ ಬಾಲಿಶ
ಕೆಲವೋ ಅರ್ಥವಿಲ್ಲದ ದಿಕ್ಕಿಲ್ಲದ ಆಸೆಗಳು....
ಮನಸಿನೊಳಗಿರುವುದನ್ನು ನಾನು ಹಂಚಿಕೊಳ್ಳಬೇಕಿದೆ
ಆದರೆ ಅವುಗಳನ್ನು ಅಕ್ಷರಗಳಲ್ಲಿ ಬಂಧಿಸಲಾರೆ...
ಭಾವಗಳನ್ನು ಬಂಧನದಿಂದ ಮುಕ್ತಗೊಳಿಸಬೇಕಿದೆ
ಆದರೆ ಅದಕ್ಕೊಂದು ದಾರಿಯನ್ನು ಹುಡುಕಬೇಕಿದೆ...
ಮೌನದ ಮುಸುಕಿನಲ್ಲೇ ಜೀವಿಸುತ್ತಿದ್ದಾಗ
ಅವುಗಳಿಗೆ ಅಕ್ಷರ ರೂಪ ಕೊಡಬಲ್ಲೆನೆಂಬ
ಆಶಾಭಾವನೆಯಿಂದ ಬರೆಯಲಾರಂಭಿಸಿದೆ.
ಆದರೆ ನನಗೀಗ ಅನಿಸುತಿದೆ
ತೋಚಿದ್ದನ್ನೆಲ್ಲಾ ನಾ ಬರೆಯಲಾರೆನೆಂದು
ಕೆಲವು ತುಸು ಗಂಭೀರ..ಹಲವು ತೀರಾ ಬಾಲಿಶ
ಕೆಲವೋ ಅರ್ಥವಿಲ್ಲದ ದಿಕ್ಕಿಲ್ಲದ ಆಸೆಗಳು....
ಮನಸಿನೊಳಗಿರುವುದನ್ನು ನಾನು ಹಂಚಿಕೊಳ್ಳಬೇಕಿದೆ
ಆದರೆ ಅವುಗಳನ್ನು ಅಕ್ಷರಗಳಲ್ಲಿ ಬಂಧಿಸಲಾರೆ...
ಭಾವಗಳನ್ನು ಬಂಧನದಿಂದ ಮುಕ್ತಗೊಳಿಸಬೇಕಿದೆ
ಆದರೆ ಅದಕ್ಕೊಂದು ದಾರಿಯನ್ನು ಹುಡುಕಬೇಕಿದೆ...
Saturday, May 15, 2010
ಮನಸಿದು ಗೊಂದಲಗಳ ಗೂಡು
ಇಲ್ಲಿ ಕೊನೆ ಮೊದಲಿಲ್ಲ
ಅರ್ಥದ ಹುಡುಕಾಟ ವ್ಯರ್ಥ
ಅಯೋಮಯ ಪದಪುಂಜ
ಸ್ಮೃತಿ ಪಟಲದ ಮೇಲೆ
ಬೇಡದ ಗೊಡವೆಗಳ ತಾಂಡವ ನೃತ್ಯ
ಅರ್ಧಸತ್ಯದ ಅಟ್ಟಹಾಸ
ಸುಡುವ ನಿರಾಸೆಯ ಬೆಂಕಿ
ಕನಸೆಂಬ ಕೂಸುಗಳ ಕಗ್ಗೊಲೆ
ಸಿಡಿದೇಳಲಾಗದ ಅಸಹಾಯಕತೆ
ಅಂಜಿಕೆಯ ನೆಳಲಲ್ಲೇ ಕೊಳೆತ
ದಾಕ್ಷಿಣ್ಯದರಮನೆಯಲ್ಲಿ ದಾಸ್ಯ
ಇನ್ನೆಲ್ಲೋ ಸ್ವಾತಂತ್ರ್ಯದ ಮೊಳಕೆ
ಭ್ರಮೆಯ ಜಾಲದೊಳಗೆ ಬಂಧಿ
ಕಣ್ಣು ಕುಕ್ಕುವ ಕಾಮನೆಗಳು
ಚಾಂಚಲ್ಯವಷ್ಟೇ ಸ್ಥಿರ
ಮನದ ಕಿನಾರೆಯ ಮೇಲೆ
ದ್ವಂದ್ವಗಳ ಚಂಡಮಾರುತ ದಾಳಿ
ಗೊಂದಲಗಳ ಓಕುಳಿ
ನಾ ನೋಡಿದಂತೆ ಲೋಕ
ಅಂತರಾಳದಲ್ಲಿ ಸೌಖ್ಯ
ಕಂಡದ್ದಷ್ಟೇ ನನಗೆ ತಿಳಿದ ಸತ್ಯ
ಕಾರ್ಮೋಡ ಕವಿದ ಬಾನು
ಅಂಚಲ್ಲೊಂದು ಬೆಳ್ಳಿರೇಖೆ
ಅವಕಾಶಗಳ ದಿಗಂತದ ವಿಸ್ತರಣ
ಅರ್ಥದ ಹುಡುಕಾಟ ವ್ಯರ್ಥ
ಅಯೋಮಯ ಪದಪುಂಜ
ಸ್ಮೃತಿ ಪಟಲದ ಮೇಲೆ
ಬೇಡದ ಗೊಡವೆಗಳ ತಾಂಡವ ನೃತ್ಯ
ಅರ್ಧಸತ್ಯದ ಅಟ್ಟಹಾಸ
ಸುಡುವ ನಿರಾಸೆಯ ಬೆಂಕಿ
ಕನಸೆಂಬ ಕೂಸುಗಳ ಕಗ್ಗೊಲೆ
ಸಿಡಿದೇಳಲಾಗದ ಅಸಹಾಯಕತೆ
ಅಂಜಿಕೆಯ ನೆಳಲಲ್ಲೇ ಕೊಳೆತ
ದಾಕ್ಷಿಣ್ಯದರಮನೆಯಲ್ಲಿ ದಾಸ್ಯ
ಇನ್ನೆಲ್ಲೋ ಸ್ವಾತಂತ್ರ್ಯದ ಮೊಳಕೆ
ಭ್ರಮೆಯ ಜಾಲದೊಳಗೆ ಬಂಧಿ
ಕಣ್ಣು ಕುಕ್ಕುವ ಕಾಮನೆಗಳು
ಚಾಂಚಲ್ಯವಷ್ಟೇ ಸ್ಥಿರ
ಮನದ ಕಿನಾರೆಯ ಮೇಲೆ
ದ್ವಂದ್ವಗಳ ಚಂಡಮಾರುತ ದಾಳಿ
ಗೊಂದಲಗಳ ಓಕುಳಿ
ನಾ ನೋಡಿದಂತೆ ಲೋಕ
ಅಂತರಾಳದಲ್ಲಿ ಸೌಖ್ಯ
ಕಂಡದ್ದಷ್ಟೇ ನನಗೆ ತಿಳಿದ ಸತ್ಯ
ಕಾರ್ಮೋಡ ಕವಿದ ಬಾನು
ಅಂಚಲ್ಲೊಂದು ಬೆಳ್ಳಿರೇಖೆ
ಅವಕಾಶಗಳ ದಿಗಂತದ ವಿಸ್ತರಣ
Saturday, May 8, 2010
ಅಮ್ಮ
ಇವತ್ತು ಬೆಳಿಗ್ಗೆ ಎದ್ದು ದಿನಪತ್ರಿಕೆ ಓದೋಣ ಅಂತ ಹೋದಾಗ ಅಪ್ಪ ಮುಖಪುಟ ಹಿಡಿದು ಕೂತಿದ್ದರು.ಪಕ್ಕದಲ್ಲೇ ಇದ್ದ ಲವಲvk ಹಿಡಿದವಳಿಗೆ ಮೊದಲ ಕಂಡದ್ದು ಅಮ್ಮಂದಿರ ದಿನದ ವಿಶೇಷ ಅಂಕಣ. ಆಗ ನಾನು ಯಾಕೆ ನನ್ನಮ್ಮನ ಬಗ್ಗೆ ಬರೆಯಬಾರದು ಅನ್ನಿಸ್ತು. ಅದರ ಫಲವಾಗಿ ಈ ಪೋಸ್ಟ್.
ನನಗಿಂತ ಮೊದಲು ನಮ್ಮಪ್ಪ ಅಮ್ಮನಿಗೆ ಒಂದು ಹೆಣ್ಣು ಮಗು ಇದ್ದಿದ್ದರಿಂದ ನಾನು ಹುಟ್ಟಿದಾಗ ಗಂಡು ಮಗು ಆಗಬೇಕು ಅಂತಾನೆ ಎಲ್ಲರ ಬಯಕೆಯಾಗಿತ್ತು.ಅದು ಸುಳ್ಳಾದಾಗ ಈ ವಿಷಯವಾಗಿ ಮಾತುಗಳನ್ನು ಕೇಳಿದ್ದು ನನ್ನಮ್ಮ, ಆ ಮಾತುಗಳು ನನ್ನ ತಮ್ಮ ಹುಟ್ಟುವವರೆಗೆ ಕೇಳುತ್ತಲೇ ಬಂದರು.ಆದರೂ ಅಮ್ಮ ಯಾವತ್ತೂ ಆ ಅಸಹನೆಯನ್ನು ನಮ್ಮ ಮುಂದೆ ತೋರಿಸಿಲ್ಲ.
ಬಹುಶಃ ಬೇರಾವುದೇ ಮಗು ನೀಡಿರದಷ್ಟು ಕಷ್ಟವನ್ನು ಚಿಕ್ಕವಳಿದ್ದಾಗ ನಾನು ಅಮ್ಮಂಗೆ ಕೊಟ್ಟಿದ್ದೀನಿ. ಅಮ್ಮನ್ನ ಬಿಟ್ಟು ಬೇರೆ ಯಾರ ಬಳಿಯೂ ಹೋಗುತ್ತಿರಲಿಲ್ಲ. ಅಪ್ಪನ ಬಳಿ ಕೂಡ ಹೋಗ್ತಾ ಇರ್ಲಿಲ್ಲ. ಅಮ್ಮ ಅಡುಗೆ ಮಾಡುತ್ತಿರಲಿ,ಬಟ್ಟೆ ಒಗೆಯುತ್ತಿರಲಿ ಅಥವಾ ಮನೆ ಒರೆಸುತ್ತಿರಲಿ ನನ್ನನ್ನು ಯಾವಾಗಲೂ ಎತ್ತಿಕೊಂಡೇ ಇರ್ಬೇಕಿತ್ತು. ಒಂದು ನಿಮಿಷ ಕೆಳಗಿಳಿಸಿದರೂ ನನ್ನ ಸೈರನ್ ಶುರು. ೧೦ ತಿಂಗಳಿಗೆಲ್ಲಾ ಚೆನ್ನಾಗಿ ಮಾತನಾಡಲು ನೆಡೆದಾಡಲು ಕಲಿತ ಮೇಲಂತೂ ನನ್ನನ್ನು ಸುಧಾರಿಸುವುದೇ ಅಮ್ಮನಿಗೆ ದೊಡ್ಡ ತಲೆನೋವಾಗಿತ್ತು. ನಮ್ಮಮ್ಮನ ಮೂರೂ ಮಕ್ಕಳಲ್ಲಿ ಆರೋಗ್ಯದ ವಿಷಯದಲ್ಲಿ ತುಂಬಾ ಸೆನ್ಸಿಟಿವ್ ಆಗಿದ್ದು ನಾನು. ಹಾಗಾಗಿ ನನ್ನ ಬಗ್ಗೆ ತುಂಬಾ ಕಾಳಜಿ ವಹಿಸುತ್ತಿದ್ದರು.
ನನಗಾಗ ಸುಮಾರು ೩ ವರ್ಷವಿದ್ದಿರಬೇಕು. ವಿಪರೀತ ಜ್ವರದಿಂದ ಪ್ರಜ್ಞೆ ತಪ್ಪುವಂತಾಗಿತ್ತು. ಆ ಜ್ವರ ಗುಣವಾದ ಮೇಲೆ ನಾನು ನನ್ನಪ್ಪನನ್ನು ತುಂಬಾ ಹಚ್ಚಿಕೊಂಡಿದ್ದು. ಅಲ್ಲಿಯವರೆಗೆ ಎಲ್ಲದಕ್ಕೂ ಅಮ್ಮ ಅಮ್ಮ ಅನ್ನುತ್ತಿದ್ದವಳು ಅಪ್ಪನ ಮುದ್ದಿನ ಮಗಳಾಗಿದ್ದು ಅಮ್ಮನಿಗೆ ಸ್ವಲ್ಪವಾದರೂ ಬೇಜಾರಾಗಿರುತ್ತೆ ಅಲ್ಲಾ...
ಆಮೇಲೆ ಅಮ್ಮನಿಗಿಂತ ಅಪ್ಪನೇ ಹತ್ತಿರವಾಗುತ್ತಾ ಹೋದರು. ಅಪ್ಪ ಮನೆಗೆ ಬಂದ ತಕ್ಷಣ ಅವರ ತೊಡೆಯೇರಿ ಕುಳಿತುಬಿಡುತಿದ್ದೆ. ಯಾರಾದರೂ ನೀನು ಅಪ್ಪನ ಮಗಳಾ ಅಮ್ಮನ ಮಗಳಾ ಅಂತ ಕೇಳಿದ್ರೆ ನಾನು ನಮ್ಮಪ್ಪನ ಮಗಳು ಅಂತಾನೇ ಹೇಳ್ತಿದ್ದೆ. ನನಗೆ ನೆನಪಿರೋ ಹಾಗೆ ನಾನು ನಮ್ಮಮ್ಮನ ಮಗಳು ಅಂತ ಹೇಳಿಯೇ ಇಲ್ಲ. ಅಮ್ಮಂಗೆ ಆಗ ನಾನೆಷ್ಟು ಕಷ್ಟ ಪಟ್ರೂ ನನ್ನ ಮಗಳು ಅದನ್ನು ತಿಳಿದುಕೊಳ್ತಾ ಇಲ್ಲವಲ್ಲಾ ಅನ್ನೋ ನೊವಿತ್ತಾ?? ಗೊತ್ತಿಲ್ಲ....
ಆದ್ರೂ ಅಮ್ಮಂಗೆ ನನ್ನ ಮೇಲಿನ ಕಾಳಜಿ ಕಡಿಮೆಯಾಗಲಿಲ್ಲ. ನನ್ನಂತೆ ನನ್ನ ಮಕ್ಕಳೂ ಆಗಬಾರದು. ಪ್ರತಿಯೊಂದಕ್ಕೂ ಇನ್ನೊಬ್ಬರ ಮೇಲೆ ಡಿಪೆಂಡ್ ಆಗಬಾರದು. ಹೆಣ್ಣು ಮಕ್ಕಳೂ ಸ್ವಾವಲಂಬಿಗಳಾಗಬೇಕು ಎಂಬುದು ನಮ್ಮಮ್ಮನ ಆಸೆಯಾಗಿತ್ತು. ಹಾಗಾಗಿಯೇ ಅಕ್ಕ ಡಿಗ್ರಿ ಮುಗಿಸುವ ಮುನ್ನ ಬಂದ ಎಲ್ಲಾ ಪ್ರಪೋಸಲ್ ಗಳನ್ನೂ ಅಮ್ಮ ತಾವಾಗಿಯೇ ತಿರಸ್ಕರಿಸಿದ್ದರು. ಕೆಲವನ್ನಂತೂ ಮನೆಯವರೆಲ್ಲರ(ಅಪ್ಪನದೂ ಸಹ) ವಿರೋಧ ಕಟ್ಟಿಕೊಂಡು ತಾವೊಬ್ಬರೇ ಎದುರಿಸಿದ್ದರು.
ಕೆಲವೊಮ್ಮೆ ಅಮ್ಮ ನಾನಾಡಿದ ಮಾತನ್ನ ವಿರೋಧಿಸಿದಾಗ ಅವರು ನನ್ನ ಶತ್ರುವೇನೋ ಅನ್ನೋ ಹಾಗೆ ನೋಡಿದ್ದೀನಿ. ಯಾವಾಗಲೋ ಅಮ್ಮನ ಮಡಿಲಲ್ಲಿ ಮಲಗಲು ಹೋದಾಗ ಅಮ್ಮ "ಅಯ್ಯೋ ಕಾಲು ನೋಯ್ತಾ ಇದೆ ನೀನು ಬೇರೆ ಬಂದ್ಯಾ ಮಲಗೋಕೆ" ಅಂತ ಅಂದಿದ್ದನ್ನೇ ಹಿಡಿದುಕೊಂಡು ಅಮ್ಮನಿಗೆ ನನ್ನ ಬಗ್ಗೆ ಪ್ರೀತಿನೇ ಇಲ್ಲ ಅಂತಾನೂ ಯೋಚ್ನೆ ಮಾಡಿದ್ದೀನಿ. ಅಮ್ಮನಿಗಿಂತ ನಾನು ಹೆಚ್ಚು ವಿಷಯ ತಿಳಿದುಕೊಂಡಿದ್ದೀನಿ ಅಂತ ಅಮ್ಮನ ಮುಂದೇನೆ ಬೀಗಿದ್ದೀನಿ. ಅಮ್ಮ ಏನಾದ್ರೂ ತಪ್ಪು ಮಾತಾಡಿದಾಗ ಅಪ್ಪನ ಜೊತೆ ಸೇರಿ ಅವರನ್ನು ಗೇಲಿ ಮಾಡಿದ್ದೀನಿ.
ನನಗೆ ಸಿ.ಇ.ಟಿ.ಯಲ್ಲಿ ೯ನೆಯ rank ಬಂದಾಗ "ದಿ ಹಿಂದೂ" ದಿನಪತ್ರಿಕೆಯವರು ದೂರವಾಣಿ ಸಂದರ್ಶನ ನಡೆಸಿದ್ದರು. ಆಗಲೂ ನಾನು ಅಪ್ಪನ ಮಗಳಾಗಿಯೇ ಉತ್ತರಿಸಿದ್ದೆ. "ನನಗೆ ವಿಶ್ವಾಸವಿಲ್ಲದಿದ್ದರೂ ನನ್ನಪ್ಪ ನನಗೆ ನೀನು ಒಳ್ಳೆಯ rank ಪಡೀತೀಯ ಅಂತಿದ್ರು. ಅವರು ಆ ರೀತಿ ನನ್ನಲ್ಲಿ ವಿಶ್ವಾಸ ತುಂಬಿದ್ದುದರಿಂದಲೇ ನಾನು ಈ rank ಪಡೆಯಲು ಸಾಧ್ಯವಾಯ್ತು" ಅಂತ ಹೇಳಿದ್ದೆ. ಅದನ್ನು ಕೇಳಿ ಅಮ್ಮನಿಗೇನನಿಸಿತೋ ಏನೋ "ನೋಡು ನನ್ನ ಮಗಳು ಅವರಮ್ಮ ಅವಳಿಗೇನೂ ಮಾಡೇ ಇಲ್ಲ ಅನ್ನೋ ಥರಾ ಮಾತಾಡ್ತಾಳೆ. ಅವಳಿಗೆ ಅವಳ ಅಪ್ಪಾನೇ ಎಲ್ಲ " ಅಂತಂದ್ರು. ಮೊದಲ ಸಲ ನನಗೆ ನಾನು ನಮ್ಮಮ್ಮನ್ನ neglect ಮಾಡ್ತಾ ಇದ್ದೀನಾ ಅನ್ನೊ ಪಾಪ ಪ್ರಜ್ಞೆ ಕಾಡಿದ್ದು ಆಗಲೇ.
ನಾನು ಇಂಜಿನಿಯರಿಂಗ್ ಸೇರಿದ ಮೇಲೆ ಅಮ್ಮನಿಗೆ gall bladder ಅಲ್ಲಿ ತೊಂದರೆ ಉಂಟಾಗಿ ಸುಮಾರು ೨ ತಿಂಗಳುಗಳ ಕಾಲ ಆಸ್ಪತ್ರೆಯಲ್ಲಿದ್ದರು. ಆಗಲೂ ನಾನು ಅಮ್ಮನ್ನ ನೋಡೋಕೆ ಅಂತ ಆಸ್ಪತ್ರೆಗೆ ಹೋಗಿದ್ದು ಮೂರೋ ನಾಲ್ಕು ಬಾರಿ ಅಷ್ಟೆ. ನನಗ್ಯಾಕೋ ಆಸ್ಪತ್ರೆಯಲ್ಲಿರುವವರನ್ನು ಹೋಗಿ ಮಾತಾಡಿಸಬೇಕು ಅಂತ ಅನ್ನಿಸೋದೇ ಇಲ್ಲ.ಆಗಂತೂ ಅಮ್ಮ ನಾನು ಸತ್ರೂ ನನ್ನ ಮಗಳು ಬೇಜಾರು ಮಾಡಿಕೊಳ್ಳೊಲ್ಲವೇನೋ ಅಂದ್ರು. ಈಗಲೂ ಕೆಲವೊಮ್ಮೆ ನಾನು ಆಗ ಮಾಡಿದ್ದು ಸರೀನಾ ತಪ್ಪಾ ಗೊತ್ತಾಗದೇ ಒದ್ದಾಡ್ತೀನಿ.
ಆದರೂ ಇವತ್ತಿಗೂ ನಾನು ಅಪ್ಪನ ಮಗಳೇ. ಅಪ್ಪನ ತೊಡೆಯ ಮೇಲೆ ಮಲಗಿದಂತೆ ಅಮ್ಮನ ಮಡಿಲಲ್ಲಿ ಮಲಗೊಲ್ಲ. ಅಪ್ಪನ ಕೈತುತ್ತು ಸವಿದಂತೆ "ಅಮ್ಮ ತಿನ್ನಿಸು" ಅಂತಾನೂ ಕೇಳೊಲ್ಲ. ಹೀಗ್ಯಾಕೆ??? ನನಗೋಸ್ಕರ ಅಮ್ಮ ಕಷ್ಟ ಪಡ್ತಾರೆ ಅಂತ ಗೊತ್ತಿದ್ರೂ ಅಮ್ಮ ಎಲ್ಲರಿಗಿಂತ ನಂಗೆ ನೀವು ತುಂಬಾ ಇಷ್ಟ ಅಂತ ಯಾಕೆ ಹೇಳೊಲ್ಲ? ನಂಗೊತ್ತು ನೀನು ಯಾವತ್ತಿದ್ರೂ ನಿಮ್ಮಪ್ಪನ ಮಗಳೇ ಅಂತ ಅಮ್ಮ ಅಂದಾಗ, ಇಲ್ಲಮ್ಮ ನಾನು ನಿಮ್ಮ ಮಗಳೂ ಕೂಡ ಅಂತ ಯಾಕೆ ಹೇಳೊಲ್ಲ? ಅಪ್ಪನ ಪ್ರೀತಿ ಮುಂದೆ ಅಮ್ಮನ ಪ್ರೀತಿ ಯಾಕೆ ಮಂಕಾಗಿ ಕಾಣ್ತಾ ಇದೆ? ಉತ್ತರ ಗೊತ್ತಿಲ್ಲ...

Sunday, April 25, 2010
ಏನು ಕಾರಣ
ನಿನ್ನನ್ನು ಮೊದಲ ಬಾರಿ ಕಂಡ ನೆನಪಿನ್ನೂ ಹಚ್ಚಹಸುರಾಗಿದೆ ಕನಸಿನ ರಾಜಕುಮಾರನೇ ಜೀವತಳೆದು ಕಣ್ಣೆದುರು ನಿಂತಂತೆ ಯಾರನ್ನೂ ಇಷ್ಟಪಡದವಳು ನಿನ್ನ ಕಂಡೊಡನೆ ಕೆಂಪಗಾಗಿದ್ದೇಕೆ? ತಿಳಿಯದಾಗಿದೆ ಉತ್ತರ ನೀ ನನ್ನ ಬಾಳಲ್ಲಿ...ನಿನ್ನನ್ನು ಮೊದಲ ಬಾರಿ ಕಂಡ
ನೆನಪಿನ್ನೂ ಹಚ್ಚಹಸುರಾಗಿದೆ
ಕನಸಿನ ರಾಜಕುಮಾರನೇ
ಜೀವತಳೆದು ಕಣ್ಣೆದುರು ನಿಂತಂತೆ
ಯಾರನ್ನೂ ಇಷ್ಟಪಡದವಳು
ನಿನ್ನ ಕಂಡೊಡನೆ ಕೆಂಪಾಗಿದ್ದೇಕೆ?
ತಿಳಿಯದಾಗಿದೆ ಉತ್ತರ
ನೀ ನನ್ನ ಬಾಳಲ್ಲಿ ಬಂದದ್ದೇಕೆ?
ಕಪ್ಪೆಚಿಪ್ಪೊಳಗಿನ ಮುತ್ತಂತಿರುವೆ
ಜಗವ ತಿಳಿಯಬೇಕು ನೀನು
ಎಲ್ಲವ ನೋಡಬೇಕು ಹುಡುಗಿ
ತಿಳಿಯಬೇಕೆಲ್ಲವ ಕಾಣದ್ದನ್ನೂ ಹುಡುಕಿ
ಎಂದು ನೀ ನನಗೆ ಹೇಳುತ್ತಿದ್ದರೆ
ನನ್ನ ಮನಸಲ್ಲೇನೋ ಉಲ್ಲಾಸ
ನೀನೊಬ್ಬ ನನ್ನೊಂದಿಗಿದ್ದರೆ
ಜಗತ್ತನ್ನೇ ಗೆದ್ದ ಉತ್ಸಾಹ
ಮೌನಗೌರಿಯಂತಿದ್ದವಳಿಗೆ
ಪಟ ಪಟ ಮಾತ ಕಲಿಸಿದವ ನೀನು
ಮಾತಿನೊಂದಿಗೆ ನನ್ನೊಳಗೀಗಿರುವ
ಆತ್ಮವಿಶ್ವಾಸ ತುಂಬಿದ್ದೂ ನೀನು
ನೀ ನನ್ನವನೇ ಕಣೋ ಹುಡುಗ ಎಂದು
ಹೇಳಬೇಕೆನಿಸುತ್ತದೆ ನೂರಾರು ಬಾರಿ
ಮನದಲ್ಲಿ ಅರಳಿದ ಮಾತು
ತುಟಿಗೆ ಬರುವುದರೊಳಗೆ ಸಾಯುತ್ತದೆ
ಕೊನೆಗೂ ಹೇಳಲೇಬೇಕೆಂದು ನಿರ್ಧರಿಸಿ
ನಿನ್ನೆದುರು ಸಾಲಂಕೃತಳಾಗಿ ಬಂದಾಗ
ತುಂಬಾ ಚೆಂದ ಕಾಣ್ತಿ ನೀನು
ಆದರೂ ಕಾಡುತಿದೆಯೇನೋ ಕೊರತೆ
ನೋಡಲದು ಕಂಗಳಿಗೆ ಸೊಗಸು
ನಿನ್ನ ಮುಡಿಯಲಿರೆ ಮಲ್ಲಿಗೆ
ತರುವೆನೀಗಲೇ ನಾನದನು ಕಾಯುತಿರು ನೀ ನಾ ಹೋಗಿ ಬರುವೆ ಎಂದು ಹೇಳಿ ಒಂದೇ ಉಸಿರಿನಲಿ ಹೊರಟು ಹೋದೆ ನೀ ಹಿಂದೆ ನೋಡದೇ
ಹೊರಬರಲು ಅಣಿಯಾಗಿದ್ದ ಮಾತುಪುನಃ ಮನದೊಳಗೆ ಬಂಧಿಯಾಯ್ತು
ನನ್ನ ಮುಗ್ಧ ಮನಸಿನೊಂದಿಗೆ
ಚೆಲ್ಲಾಟವಾಡುವ ಬಯಕೆಯೇ ವಿಧಿಯೇ?
ಮಲ್ಲಿಗೆ ತರುವೆನೆಂದು ಸಂಜೆ ಹೋದವನು
ಇನ್ನೂ ಹಿಂದಿರುಗಿ ಬಂದಿಲ್ಲವೇಕೆ?
ಮಲ್ಲಿಗೆಯ ಹುಡುಕಾಟ ತಡವಾಯ್ತೋ?
ಬರುವ ಹಾದಿಯಲ್ಲಿ ನೂರಾರು ವಿಘ್ನಗಳೋ?
ಅಥವಾ ಹೂವಿನ ಅಂದಕ್ಕೆ ಸೋತು
ಅಲ್ಲೇ ಇದ್ದು ಬಿಡುವ ನಿರ್ಧಾರವೋ?
( ವಿ.ಕ.ದಲ್ಲಿ ಇಂದು ಪ್ರಕಟವಾಗಿರುವ ಮಣಿಕಾಂತ್ ಅವರ ಲೇಖನದಿಂದ ಪ್ರೇರಿತ)

Tuesday, March 30, 2010
ಇರಲಿ ಈ ಬಂಧ ಶಾಶ್ವತ
ಕಣ್ಣ ತುಂಬ ನೂರು ಕನಸು
ಮನವ ಕಾಡೋ ನೂರು ನೆನಪು
ಹೊತ್ತು ಹೊಸತು ಹೆಜ್ಜೆಯಿಡಲು
ನಿಮ್ಮ ಭೇಟಿಯಾಯಿತು
ಮೊದಲ ದಿನವೇ ಮಾತನಾಡಿ
ಇಷ್ಟಾನಿಷ್ಟ ತಿಳಿದುಕೊಂಡು
ಕಷ್ಟ ಸುಖವ ಹಂಚಿಕೊಳಲು
ಸ್ನೇಹ ಕುದುರಿತು
ಹಲವು ವಿಷಯಗಳನು ಕೆದಕಿ
ನೆನಪುಗಳನು ಮೆಲುಕು ಹಾಕಿ
ನಾವು ಜೊತೆಯಲಿರಲು ಸಮಯ
ಲೆಕ್ಕ ತಪ್ಪಿತು
ಬಿರುಕು ಎಲ್ಲೂ ಮೂಡಲಿಲ್ಲ
ಜಗಳಕಿಲ್ಲಿ ಜಾಗವಿಲ್ಲ
ಮನವ ಅರಿತ ಮೇಲೆ ವಿರಸ
ಕಾಣದಾಯಿತು
ನಾನು ನಡೆವ ಹಾದಿಯಲ್ಲಿ
ಜೊತೆಗೆ ನೀವು ಹೆಜ್ಜೆಯಿಡಲು
ಅಕ್ಕಪಕ್ಕ ಸುತ್ತಮುತ್ತ
ಹಸಿರೆ ತುಂಬಿದೆ
ನನ್ನ ನಿಮ್ಮ ನಡುವ ಬಂಧ
ಹೇಳಲಿಕ್ಕೆ ಪದಗಳಿಲ್ಲ
ಮಾತು ಕೂಡ ಸೋಲನೊಪ್ಪಿ
ಮೌನವಾಗಿದೆ
ಯಾರ ಪುಣ್ಯಫಲವೋ
ಈ ನಮ್ಮ ಬಂಧನ
ಎಂದೂ ಹೀಗೆ ಇರಲಿ ನಮ್ಮ
ಭಾವ ಸ್ಪಂದನ
ಮನವ ಕಾಡೋ ನೂರು ನೆನಪು
ಹೊತ್ತು ಹೊಸತು ಹೆಜ್ಜೆಯಿಡಲು
ನಿಮ್ಮ ಭೇಟಿಯಾಯಿತು
ಮೊದಲ ದಿನವೇ ಮಾತನಾಡಿ
ಇಷ್ಟಾನಿಷ್ಟ ತಿಳಿದುಕೊಂಡು
ಕಷ್ಟ ಸುಖವ ಹಂಚಿಕೊಳಲು
ಸ್ನೇಹ ಕುದುರಿತು
ಹಲವು ವಿಷಯಗಳನು ಕೆದಕಿ
ನೆನಪುಗಳನು ಮೆಲುಕು ಹಾಕಿ
ನಾವು ಜೊತೆಯಲಿರಲು ಸಮಯ
ಲೆಕ್ಕ ತಪ್ಪಿತು
ಬಿರುಕು ಎಲ್ಲೂ ಮೂಡಲಿಲ್ಲ
ಜಗಳಕಿಲ್ಲಿ ಜಾಗವಿಲ್ಲ
ಮನವ ಅರಿತ ಮೇಲೆ ವಿರಸ
ಕಾಣದಾಯಿತು
ನಾನು ನಡೆವ ಹಾದಿಯಲ್ಲಿ
ಜೊತೆಗೆ ನೀವು ಹೆಜ್ಜೆಯಿಡಲು
ಅಕ್ಕಪಕ್ಕ ಸುತ್ತಮುತ್ತ
ಹಸಿರೆ ತುಂಬಿದೆ
ನನ್ನ ನಿಮ್ಮ ನಡುವ ಬಂಧ
ಹೇಳಲಿಕ್ಕೆ ಪದಗಳಿಲ್ಲ
ಮಾತು ಕೂಡ ಸೋಲನೊಪ್ಪಿ
ಮೌನವಾಗಿದೆ
ಯಾರ ಪುಣ್ಯಫಲವೋ
ಈ ನಮ್ಮ ಬಂಧನ
ಎಂದೂ ಹೀಗೆ ಇರಲಿ ನಮ್ಮ
ಭಾವ ಸ್ಪಂದನ
Thursday, March 4, 2010
ಇಂದಿನ ಪಯಣ
ಇವತ್ತು ಬಸಲ್ಲಿ ಕಾಲೇಜಿಗೆ ಹೋಗ್ತೀನಿ ಅಂತ ಹೇಳಿ ಮನೆ ಬಿಟ್ಟಾಗ ೧೦:೧೫. ೧೧:೩೦ಕ್ಕೆ microcontrollers ಪರೀಕ್ಷೆ ಶುರು ಆಗೋದಿತ್ತು. ನಮ್ಮ ಮನೆಯಿಂದ ಸುಮಾರು ಒಂದುವರೆ ಕಿ.ಮೀ. ದೂರವಿರುವ ವಿಜಯನಗರ ಬಸ್ ನಿಲ್ದಾಣಕ್ಕೆ ನಡೆಯುತ್ತಾ ಹೊರಟೆ. ವಿಜಯನಗರ ಪಾದಚಾರಿ ಸುರಂಗ ಮಾರ್ಗದಲ್ಲಿ ಮೊದಲ ಸಲ ನಡೆದು ನಿಲ್ದಾಣ ತಲುಪಿದಾಗ ೧೦:೨೮. ಸರಿ ಬಸ್ ಗೋಸ್ಕರ ಕಾಯ್ತಾ ಇದ್ದೆ. ನಮ್ಮ ಕಾಲೇಜಿನ ಕೆಲವು ಹುಡುಗಿಯರು ಅದೇ ನಿಲ್ದಾಣದಲ್ಲಿ ಕಾಯುತ್ತಿದ್ದರು. ೧೦:೪೦ ಆದರೂ ನಮ್ಮ ಕಾಲೇಜು ಮಾರ್ಗದಲ್ಲಿ ಹೋಗುವ ಯಾವ ಬಸ್ ಕೂಡ ಬರಲಿಲ್ಲ. ಅದಕ್ಕೂ ಮುಂಚೆ ಬಂದಿದ್ದ ೪೦೧ R ಅಲ್ಲಿ ನಾಯಂಡಹಳ್ಳಿವರೆಗೆ ಹೋಗಿ ಅಲ್ಲಿಂದ ಇನ್ನೊಂದು ಬಸ್ ಅಲ್ಲಿ ಹೋಗಬಹುದಿತ್ತು ಅಂತ ಅನ್ನಿಸಿದ್ರೂ ಈಗ ನಾನು ಈ ಥರ ಯೋಚ್ನೆ ಮಾಡಿದ್ರೆ ಹೋಗಿರೋ ಬಸ್ ವಾಪಸ್ ಬರೊಲ್ಲ ಅಲ್ವಾ ಕಾಯೋಣ ಅಂತ ಅಲ್ಲೆ ನಿಲ್ದಾಣದಲ್ಲಿ ನಿಂತೆ.
ಇನ್ನೊಂದು ೫ ನಿಮಿಷವಾದ ಮೇಲೆ ಅಲ್ಲಿ ಕಾಯುತ್ತಿದ್ದ ನಮ್ ಕಾಲೇಜಿನ ೩ ಹುಡುಗಿಯರು ಆಟೋದಲ್ಲಿ ಹೊರಟು ಹೋದರು. ಅಯ್ಯೊ ನಾನೇನು ಮಾಡಲಿ... ಇನ್ನೇನು ಮಾಡೋದು ಇನ್ನೊಂದ್ ಐದು ನಿಮಿಷ ನೋಡೋದು ಬಸ್ ಸಿಗಲಿಲ್ಲ ಅಂದ್ರೆ ಆಟೋದಲ್ಲೇ ಹೋಗೋದು ಅಂತ ಅಂದುಕೊಳ್ತಾ ಇರೋವಾಗ್ಲೇ ಬಂತು ಬನಶಂಕರಿಗೆ ಹೋಗೋ ಪುಷ್ಪಕ್ ಪ್ಲಸ್... ಹತ್ತಿ ಡ್ರೈವರ್ ಹಿಂದಿನ ಸೀಟಲ್ಲೇ ಕುಳಿತೆ. ಇದೇ ಮೊದಲೇನಾಗಿರಲಿಲ್ಲ. ಆದರೂ ನಾನು ಮುಂಚೆ ಅಲ್ಲಿ ಕುಳಿತಾಗ ಗಮನಿಸುತ್ತಿದ್ದ ವಿಷಯ ಮತ್ತು ಇವತ್ತು ಗಮನಿಸಿದ ವಿಷಯ ಬೇರೆಯವು... ಮುಂಚೆ ಅಲ್ಲಿ ಕುಳಿತಾಗ ಬಸ್ ಗೆ ಹತ್ತುವವರು ಇಳಿಯುವವರು ಕಿಟಕಿಯಿಂದ ಕಾಣುವ ಸುತ್ತ ಮುತ್ತ ಇರುವ ಅಂಗಡಿಗಳ ಪೋಸ್ಟರ್ ಗಳೇ ಕಣ್ಣಿಗೆ ಬೀಳ್ತಾ ಇದ್ವು. ಇವತ್ತು ಅದರ ಜೊತೆಗೆ ಡ್ರೈವರ್ ಗಾಡಿ ಹೇಗೆ ಓಡಿಸ್ತಾರೆ ಅನ್ನೋದನ್ನು ಗಮನಿಸ್ತಾ ಇದ್ದೆ.... ಗಾಡಿ ವೇಗಕ್ಕೆ ತಕ್ಕಂತೆ ಗೇರ್ ಬದಲಾಯಿಸುತ್ತಿದ್ದುದು, ಸ್ಪೀಡೋಮೀಟರ್ ಅಲ್ಲಿ ಕಾಣುವ ಗಾಡಿಯ ವೇಗ ಎಲ್ಲವನ್ನು ಗಮನಿಸುತ್ತಿದ್ದೆ.ನಮ್ಮ ಆಭಿರುಚಿ ಆಸಕ್ತಿಗಳು ಬದಲಾದಂತೆ ನಮ್ಮ ಕಣ್ಣಿಗೆ ಕಾಣುವ ವಿಷಯಗಳು ಬದಲಾಗುತ್ತವೆ ಅಲ್ವಾ... ಹೀಗೆ ಅತ್ತಿಗುಪ್ಪೆ ಬಳಿ ಬಂದಾಗ ಎಂದಿನಂತೆ ಅಲ್ಲಿ ಟ್ರಾಫಿಕ್ ಜಾಮ್.
ಗಡಿಯಾರ ಗಂಟೆ ೧೧:೦೦ ತೋರಿಸ್ತಾ ಇತ್ತು. ಅಯ್ಯೊ ಈ ಟ್ರಾಫಿಕ್ ಹೀಗೆ ಇದ್ರೆ ನಾನು ಸರಿಯಾದ ಸಮಯಕ್ಕೆ ಕಾಲೇಜಿಗೆ ಹೋಗ್ತೀನಾ... ಪರೀಕ್ಷೆ ಸಮಯದಲ್ಲಿ ಬಸ್ಸಲ್ಲಿ ಹೋಗುವ ನಿರ್ಧಾರ ತಗೊಂಡಿದ್ದು ತಪ್ಪಾಯ್ತು ಅಂತ ಒಂದು ಮನಸ್ಸು ಹೇಳ್ತಿತ್ತು. ಆದ್ರೆ ಇನ್ನೊಂದು ಮನಸ್ಸು ೮:೧೫ಕ್ಕೆ ಕಾಲೇಜಿಗೆ ಹೋಗೋದಿಕ್ಕೆ ನೀನು ಸ್ಕೂಟಿಯಲ್ಲಿ ಬರ್ತಾ ಇದ್ದಾಗ ಇದೇ ಜಂಕ್ಷನ್ ಅಲ್ಲಿ ೮:೦೦ ಗಂಟೆಗೆ ಇದ್ರು ೮:೧೦ ಕ್ಕೆಲ್ಲಾ ಕಾಲೇಜ್ ತಲುಪ್ತಾ ಇರ್ಲಿಲ್ವಾ ಅಂತಿತ್ತು. ಹೇಗೋ ಅದೇ ಟ್ರಾಫಿಕ್ ಅಲ್ಲೇ ದೀಪಾಂಜಲಿನಗರದ ಬಳಿಯಿರುವ ಸರ್ಕಲ್ ಗೆ ಬರುವಷ್ಟರಲ್ಲಿ ೧೧:೧೦ ಆಗಿತ್ತು. ಇನ್ನು ಮೈಸೂರು ರಸ್ತೆಯಲ್ಲಿ ಯಾವುದೇ ಬ್ಲಾಕ್ ಇರದಿರಲಿ ಅಂತ ದೇವರಲ್ಲಿ ಬೇಡಿಕೊಂಡೆ.
ಇನ್ನು ಮುಂದೆ ಎಲ್ಲಾ ಸುಸೂತ್ರವಾಗಿತ್ತು. ಎಲ್ಲೂ ಜಾಮ್ ಆಗದೇ ಪಿ.ಇ.ಎಸ್. ಕಾಲೇಜಿನ ನಿಲ್ದಾಣದಲ್ಲಿಳಿದಾಗ ೧೧:೧೮. ಹಾಗೆ ರಸ್ತೆ ದಾಟಿ ಬಂದಾಗ ದಾರಿಯಲ್ಲಿ ಎದುರುಗೊಂಡ ಜೂನಿಯರ್ಸ್ ಸಹನಾ ಮತ್ತೆ ನವೀನ್ ಜೊತೆ ಮಾತಾಡ್ತಾ ಇದ್ದಾಗ ಪರೀಕ್ಷೆಯ ಮೊದಲ ಬೆಲ್ ಹೊಡೆಯಿತು.ಸರಿ ಅವರಿಗೆ ಪರೀಕ್ಷೆಗೆ "ಆಲ್ ದಿ ಬೆಸ್ಟ್" ಹೇಳಿ ನನ್ನ ತರಗತಿಗೆ ಓಡಿದೆ. ಸರಿಯಾದ ಸಮಯಕ್ಕೆ ಕಾಲೇಜ್ ಸೇರಿ ಪರೀಕ್ಷೆ ಬರೆದೆ.
ವಾಪಸ್ ಬರುವಾಗ ನಿಲ್ದಾಣಕ್ಕೆ ಬಂದ ಐದು ನಿಮಿಷಗಳೊಳಗೆ ೫೦೦ ಕೆ ಮಾರ್ಕೊಪೋಲೋ ಬಸ್ ಹತ್ತಿದೆ. ಸುಮಾರು ೧:೪೦ ಕ್ಕೆಲ್ಲಾ ವಿಜಯನಗರ ತಲುಪಿದೆ. ಅಲ್ಲಿಂದ ಮತ್ತೆ ಮನೆ ಕಡೆ ನಡಿಗೆ. ಮನೆಗೆ ಬಂದ ತಕ್ಷಣ ಅಪ್ಪ ಕೇಳಿದ್ರು ಹೇಗಿತ್ತು ಬಸಲ್ಲಿ ಹೋದ ಅನುಭವ ಅಂತ. ನಾನು ಚೆನ್ನಾಗಿತ್ತು ಅಂದೆ. ಅಮ್ಮ "ಹೂಂ... ಬಿಸಿಲಲ್ಲಿ ನಡೆದು ಬಂದಿದ್ದೀಯಾ..,ಕೆನ್ನೆಯೆಲ್ಲಾ ಹೇಗೆ ಕೆಂಪಗಾಗಿದೆ ನೋಡ್ಕೋ. ನೀನು ಹೀಗೆ ಒಂದು ತಿಂಗಳು ಈ ಬೇಸಿಗೆಯಲ್ಲಿ ಬಸಲ್ಲಿ ಕಾಲೇಜಿಗೆ ಹೋಗಿ ಬಂದ್ರೆ ನೋಡೋಕೆ ಆಗೊಲ್ಲ ಹಾಗಾಗ್ತೀಯಾ" ಅಂದ್ರು. ಏನೇ ಅಂದ್ರೂ ಇವತ್ತಿನ ಪಯಣ ಮಾತ್ರ ಚೆನ್ನಾಗಿತ್ತು.
ಅಂದ ಹಾಗೆ ಪಿ.ಇ.ಎಸ್.ಐ.ಟಿ. ಸೇರಿದ ಮೇಲೆ ಇದು ಮೂರನೇ ಬಾರಿ ನಾನು ಬಸಲ್ಲಿ ಕಾಲೇಜಿಗೆ ಹೋಗಿದ್ದು :)

Subscribe to:
Posts (Atom)